alex Certify BIG BREAKING: ಕೋವಿಡ್ ಸರಣಿ ಸ್ಫೋಟ; ಒಂದೇ ದಿನದಲ್ಲಿ ಮತ್ತೆ 1,41,986 ಜನರಲ್ಲಿ ಸೋಂಕು ಪತ್ತೆ; ಶೇ.9.28ಕ್ಕೆ ಏರಿಕೆಯಾದ ಪಾಸಿಟಿವಿಟಿ ರೇಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೋವಿಡ್ ಸರಣಿ ಸ್ಫೋಟ; ಒಂದೇ ದಿನದಲ್ಲಿ ಮತ್ತೆ 1,41,986 ಜನರಲ್ಲಿ ಸೋಂಕು ಪತ್ತೆ; ಶೇ.9.28ಕ್ಕೆ ಏರಿಕೆಯಾದ ಪಾಸಿಟಿವಿಟಿ ರೇಟ್

ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಸ್ಫೋಟಗೊಂಡಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,41,986 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದಿನದ ಕೋವಿಡ್ ಪಾಸಿಟಿವ್ ರೇಟ್ ಶೇ.9.28ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 285 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 483463 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 472169 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 40895 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34412740 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 15,29,948 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 90,59,360 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,50,61,92,903 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...