alex Certify BIG BREAKING: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ; ಒಂದೇ ದಿನದಲ್ಲಿ 593 ಜನರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಕುಸಿತ; ಒಂದೇ ದಿನದಲ್ಲಿ 593 ಜನರ ಸಾವು

ನವದೆಹಲಿ: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತ ಕಂಡುಬಂದಿದ್ದು, ಕಳೆದ 24 ಗಂಟೆಯಲ್ಲಿ 41,649 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದರೂ ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ.

ಕಳೆದ 24 ಗಂಟೆಯಲ್ಲಿ 593 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 423810 ಕ್ಕೆ ಏರಿಕೆಯಾಗಿದೆ.

ಶಾಕಿಂಗ್: ಅತ್ತಿಗೆ ಕೂಡಿ ಹಾಕಿ ಅತ್ಯಾಚಾರ, ನೀಚ ಕೃತ್ಯಕ್ಕೆ ಗಂಡನಿಂದಲೂ ಸಾಥ್

ಇನ್ನು ದೇಶದಲ್ಲಿ 408920 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 37291 ಜನರು ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 30781263 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 17,76,315 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 24ಗಂಟೆಯಲ್ಲಿ 52,99,036 ಜನರಿಗೆ ಲಸಿಕೆ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 46,15,18,479 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...