ನವದೆಹಲಿ: ಕಳೆದ ಮೂರು ದಿನಗಳಿಂದ ಕುಸಿತ ಕಂಡಿದ್ದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡಿದೆ. 24 ಗಂಟೆಯಲ್ಲಿ 18,987 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 246 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 451435 ಕ್ಕೆ ಏರಿಕೆಯಾಗಿದೆ.
ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಹೊಸ ನಿಯಮಾವಳಿ, ಪಿ.ಹೆಚ್.ಡಿ. ಕಡ್ಡಾಯವಲ್ಲ ಎಂದ ಯುಜಿಸಿ
ಇನ್ನು ದೇಶದಲ್ಲಿ 206586 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 19808 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33362709 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ ದೇಶದಲ್ಲಿ 13,01,083 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 35,66,347 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 96,82,20,997 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.