alex Certify BIG BREAKING: ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆ; ಒಂದೇ ದಿನ ಮಹಾಮಾರಿಗೆ 450ಕ್ಕೂ ಹೆಚ್ಚು ಜನ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆ; ಒಂದೇ ದಿನ ಮಹಾಮಾರಿಗೆ 450ಕ್ಕೂ ಹೆಚ್ಚು ಜನ ಬಲಿ

ನವದೆಹಲಿ: ಒಂದೆಡೆ ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಒಮಿಕ್ರಾನ್ ಅಟ್ಟಹಾಸ ಹೆಚ್ಚುತ್ತಿದ್ದರೆ ಮತ್ತೊಂದೆಡೆ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತಗೊಂಡಿದೆ. ಆದರೆ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 5,326 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿ ಒಂದೇ ದಿನದಲ್ಲಿ ದಿಢೀರ್ ಏರಿಕೆಯಾಗಿದ್ದು, 24 ಗಂಟೆಯಲ್ಲಿ 453 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 478007 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 79097 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 8043 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34195060 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 10,14,079 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 64,56,911 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,38,34,78,181 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...