alex Certify BIG BREAKING: ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಪವರ್ ಸ್ಟಾರ್ ಆರೋಗ್ಯ ಸ್ಥಿತಿ; ವಿಕ್ರಂ ಆಸ್ಪತ್ರೆಗೆ ಸಿಎಂ ಬೊಮ್ಮಾಯಿ ದೌಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಪವರ್ ಸ್ಟಾರ್ ಆರೋಗ್ಯ ಸ್ಥಿತಿ; ವಿಕ್ರಂ ಆಸ್ಪತ್ರೆಗೆ ಸಿಎಂ ಬೊಮ್ಮಾಯಿ ದೌಡು

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವಿಕ್ರಂ ಆಸ್ಪತ್ರೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಿ, ಪುನೀತ್ ಆರೋಗ್ಯದ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ.

ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಪುನೀತ್ ರಾಜ್ ಕುಮಾರ್ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಎಂದು ತಿಳಿದುಬಂದಿದೆ. ಪುನೀತ್ ರಾಜ್ ಕುಮಾರ್ ಅವರಿಗೆ ತೀವ್ರ ಅನಾರೋಗ್ಯ ಹಿನ್ನೆಲೆ ಸಿಎಂ ಬಸವರಾಜ್ ಬೊಮ್ಮಾಯಿ ವಿಕ್ರಂ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಪುನೀತ್ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಕಲೆ ಹಾಕಿದ್ದಾರೆ.

ಇದೇ ವೇಳೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಚಿವ ಆರ್.ಅಶೋಕ್, ಹಿರಿಯ ಪೊಲೀಸ್ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇನ್ನು ನಟರಾದ ಯಶ್, ರವಿಚಂದ್ರನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಆಸ್ಪತ್ರೆಗೆ ಧಾವಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...