ಟೊಕಿಯೋ: ಗುಂಡಿನ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ (67) ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.
ನಾರಾ ನಗರದಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು. ಗುಂಡಿನ ದಾಳಿಯಿಂದ ಕುಸಿದು ಬಿದಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿಂಜೊ ಅಬೆ ಅವರ ಎದೆಯ ಭಾಗಕ್ಕೆ ಗುಂಡೇಟು ತಗುಲಿತ್ತು. ಆದರೆ ಚಿಕಿತ್ಸೆ ಫಲಿಸದೇ ಶಿಂಜೊ ಅಬೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮಾಜಿ ಪ್ರಧಾನಿ ಮೇಲೆ ಗುಂಡಿನ ದಾಳಿ ನಡೆಸಿದ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಜಪಾನ್ ನ ನಾರಾ ನಗರದಲ್ಲಿ ಚುನಾವಣ ಅಪ್ರಚಾರದಲ್ಲಿ ತೊಡಗಿದ್ದ ವೇಳೆ ಈ ದುರಂತ ಸಂಭವಿಸಿದೆ.