
ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್ 1 ರಂದು ಮೊದಲ ಹಾಗೂ ಡಿಸೆಂಬರ್ 5 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಡಿಸೆಂಬರ್ 8 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.
ಗುಜರಾತ್ ನಲ್ಲಿ 4.9ಕೋಟಿ ಮತದಾರರಿದ್ದು, 51,782 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಈ ಪೈಕಿ 1274 ಮತಗಟ್ಟೆಗಳನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಲಿದ್ದಾರೆ. ಅಲ್ಲದೇ ಹಿರಿಯ ನಾಗರಿಕರಿಗೆ ಮತದಾನಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ರಾಜೀವ್ ಕುಮಾರ್ ಮಾಹಿತಿ ನೀಡಿದರು.