alex Certify BIG BREAKING: ಗುಜರಾತ್‌ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ; ಎರಡು ಹಂತಗಳಲ್ಲಿ ಮತದಾನ; ಡಿಸೆಂಬರ್‌ 8 ರಂದು ಫಲಿತಾಂಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಗುಜರಾತ್‌ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ; ಎರಡು ಹಂತಗಳಲ್ಲಿ ಮತದಾನ; ಡಿಸೆಂಬರ್‌ 8 ರಂದು ಫಲಿತಾಂಶ

ಕೇಂದ್ರ ಚುನಾವಣಾ  ಆಯೋಗ ಇಂದು ಗುಜರಾತ್‌ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟಿಸಿದ್ದು,  ಎರಡು ಹಂತದಲ್ಲಿ ಮತದಾನ ನಡೆಯಲಿದೆ. ಅಲ್ಲದೇ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆ ಮತ ಎಣಿಕೆ ಜೊತೆಗೇ ಗುಜರಾತ್‌ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯವೂ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತ  ರಾಜೀವ್‌ ಕುಮಾರ್‌ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ಡಿಸೆಂಬರ್‌ 1 ರಂದು ಮೊದಲ ಹಾಗೂ ಡಿಸೆಂಬರ್‌ 5 ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬಂದಿದೆ. ಡಿಸೆಂಬರ್‌ 8 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಗುಜರಾತ್‌ ನಲ್ಲಿ 4.9ಕೋಟಿ ಮತದಾರರಿದ್ದು, 51,782 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಈ ಪೈಕಿ 1274 ಮತಗಟ್ಟೆಗಳನ್ನು ಸಂಪೂರ್ಣವಾಗಿ ಮಹಿಳಾ ಸಿಬ್ಬಂದಿಯೇ ನಿರ್ವಹಿಸಲಿದ್ದಾರೆ. ಅಲ್ಲದೇ ಹಿರಿಯ ನಾಗರಿಕರಿಗೆ ಮತದಾನಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ರಾಜೀವ್‌ ಕುಮಾರ್‌ ಮಾಹಿತಿ ನೀಡಿದರು.

Image

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...