alex Certify BIG BREAKING: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಆಪ್ತ ಮಹಾಂತೇಶ್ ಪತ್ನಿ ಪೊಲೀಸರ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ; ಆಪ್ತ ಮಹಾಂತೇಶ್ ಪತ್ನಿ ಪೊಲೀಸರ ವಶಕ್ಕೆ

ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರೂಜಿಯವ ಆಪ್ತ ಮಹಾಂತೇಶ್ ಶಿರೂರ ಅವರ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಂದ್ರಶೇಖರ್ ಗುರೂಜಿ ಹತ್ಯೆಯ ಹಿಂದೆ ಅವರ ಆಪ್ತ ಮಹಾಂತೇಶ್ ಕೈವಾಡವಿರುವ ಶಂಕೆ ವ್ಯಕ್ತವಾಗಿದ್ದು, ಪರಿಚಿತರಿಂದಲೇ ಗುರೂಜಿ ಕೊಲೆಯಾಗಿದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಪೊಲೀಸರು ಗುರೂಜಿ ಆಪ್ತ ಮಹಾಂತೇಶ್ ಶಿರೂರ ಅವರ ಪತ್ನಿ ವನಜಾಕ್ಷಿಯನ್ನು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿಯ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಇಂದು ಮಧ್ಯಾಹ್ನ ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿಯವರನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೈದಿದ್ದರು. ಗುರೂಜಿ ಕಚೇರಿಯ ಮಾಜಿ ಸಿಬ್ಬಂದಿಗಳಿಂದ ಹತ್ಯೆಯಾಗಿರುವ ಶಂಕೆ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...