ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ವಿಶ್ವಾಸಮತ ಸಾಬೀತುಪಡಿಸಲು ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಸೂಚನೆ ನೀಡಿದ್ದಾರೆ.
ಇದನ್ನು ಪ್ರಶ್ನಿಸಿ ‘ಮಹಾ ವಿಕಾಸ ಅಘಾಡಿ’ ಸರ್ಕಾರ, ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತಾದರೂ ಸದನದಲ್ಲಿಯೇ ವಿಶ್ವಾಸಮತ ನಡೆಯುವುದು ಸೂಕ್ತ ಎಂದು ಸುಪ್ರೀಂ ಅಭಿಪ್ರಾಯಪಟ್ಟಿದೆ.
ಇದರ ಮಧ್ಯೆ ಜೈಲು ಪಾಲಾಗಿರುವ ಶಾಸಕರುಗಳಾದ ನವಾಬ್ ಮಲ್ಲಿಕ್ ಹಾಗೂ ಅನಿಲ್ ದೇಶಮುಖ್ ತಾವು ಅಧಿವೇಶನದಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಡುವಂತೆ ಸಲ್ಲಿಸಿದ ಮನವಿಗೆ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ.
ಹೀಗಾಗಿ ಉಭಯ ಶಾಸಕರುಗಳು ನಾಳಿನ ಅಧಿವೇಶನದಲ್ಲಿ ಪಾಲ್ಗೊಳ್ಳುವುದು ಅಧಿಕೃತವಾಗಿದೆ.