
ಮಂಡ್ಯ: ಟಿಪ್ಪರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ನಡೆದಿದೆ.
ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೆಂಕಟೇಶ(25), ಮುತ್ತಮ್ಮ(45), ಬಸಮ್ಮಣ್ಣಿ(30) ಹಾಗೂ ಗಾಯಗೊಂಡಿದ್ದ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.