alex Certify BIG BREAKING: ಡಿ.ಆರ್.ಡಿ.ಒ ಮಾಜಿ ವಿಜ್ಞಾನಿ, ಖ್ಯಾತ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಡಿ.ಆರ್.ಡಿ.ಒ ಮಾಜಿ ವಿಜ್ಞಾನಿ, ಖ್ಯಾತ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ ಇನ್ನಿಲ್ಲ

ಬೆಂಗಳೂರು: ಡಿಆರ್ಡಿಒ ಮಾಜಿ ವಿಜ್ಞಾನಿ, ಖ್ಯಾತ ಬರಹಗಾರ ಸುಧೀಂದ್ರ ಹಾಲ್ದೊಡ್ಡೇರಿ (61) ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಸುಧೀಂದ್ರ ಹಾಲ್ದೊಡ್ಡೇರಿ ಅವರಿಗೆ ಕೆಲ ದಿನಗಳ ಹಿಂದೆ ತೀವ್ರ ಹೃದಯಾಘಾತವಾಗಿತ್ತು. ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.

ಸುಧೀಂದ್ರ ಹಾಲ್ದೊಡ್ಡೇರಿ ಅವರ ನಿಧನಕ್ಕೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಸಂತಾಪ ಸೂಚಿಸಿದ್ದು, ಅವರು ವಿಧಿವಶರಾದ ಸುದ್ದಿ ಕೇಳಿ ನೋವಾಯಿತು. ದೇವರು ಅವರ ಆತ್ಮಕ್ಕೆ ಶಾಂತಿಯನ್ನು ನೀಡಲಿ, ಕುಟುಂಬ ವರ್ಗ ಹಾಗೂ ಆಪ್ತರಿಗೆ ಈ ದುಃಖ ಭರಿಸುವ ಶಕ್ತಿ ದಯಪಾಲಿಸಲಿ ಎಂದು ಕಂಬನಿ ಮಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...