ಬೆಂಗಳೂರು: ರಾಜಧಾನಿ ಬೆಂಗಳೂರಿನ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಕರೆಯೊಡ್ಡಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಕಂಗಾಲಾಗಿದ್ದಾರೆ.
ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ನ್ಯಾಷನಲ್ L.U. ಪಬ್ಲಿಕ್ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದೆ. ಈ ಶಾಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಶಾಲೆಯಾಗಿದೆ ಎಂದು ತಿಳಿದುಬಂದಿದೆ.
ಶಾಲೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ರವಾನಿಸಲಾಗಿದ್ದು, ಸ್ಥಳಕ್ಕೆ ಆರ್.ಆರ್.ನಗರ ಠಾಣೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ.