ಮುಖ್ಯಮಂತ್ರಿ ಹುದ್ದೆಗಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ನಡುವೆ ನಡೆದಿದ್ದ ಹಗ್ಗ ಜಗ್ಗಾಟಕ್ಕೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹೆಸರನ್ನು ವರಿಷ್ಠರು ಘೋಷಿಸಿದ್ದು, ಡಿ.ಕೆ. ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಲಿದ್ದಾರೆ.
ಇದರ ಜೊತೆಗೆ ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿಯೂ ಮುಂದುವರೆಯಲಿದ್ದು, ಕೇವಲ ಒಂದು ಉಪ ಮುಖ್ಯಮಂತ್ರಿ ಹುದ್ದೆಗೆ ಮಾತ್ರ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ಉಪ ಮುಖ್ಯಮಂತ್ರಿಯಾಗುವ ನಿರೀಕ್ಷೆಯಲ್ಲಿದ್ದ ಡಾ. ಜಿ. ಪರಮೇಶ್ವರ್ ಅವರಿಗೆ ನಿರಾಸೆಯಾಗಿದೆ.
ಮುಖ್ಯಮಂತ್ರಿ ಹುದ್ದೆಯನ್ನು ಮೊದಲ ಅವಧಿಗೆ ಸಿದ್ದರಾಮಯ್ಯ ನಿರ್ವಹಿಸಲಿದ್ದು, ಎರಡು ವರ್ಷಗಳ ಬಳಿಕ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ. ಆ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಬದಲು ಮತ್ತೊಬ್ಬರನ್ನು ನೇಮಿಸಬಹುದು ಎಂದು ಹೇಳಲಾಗಿದೆ.