ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ಕೇಸ್ ರದ್ದು ಪಡಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ.
2018ರಲ್ಲಿ ಈಗಲ್ ಟನ್ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಡಿ.ಕೆ. ಶಿವಕುಮಾರ್ ಅವರಿಂದ ಕೆಲ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ಈಗಲ್ ಟನ್ ರೆಸಾರ್ಟ್ ನಲ್ಲಿ ಡಿಕೆಶಿ ಇದ್ದ ರೂಂ ನಲ್ಲಿ ಕೆಲ ಹಣಕಾಸು ವರ್ಗಾವಣೆಗೆ ಸಂಬಂಧಿಸಿದ ದಾಖಲೆಗಳನ್ನು ಜಪ್ತಿ ಮಾಡಿದ್ದರು. ಐಟಿ ಇಲಾಖೆ ಅಧಿಕಾರಿಗಳ ತನಿಖೆ ತಡೆಕೋರಿ ಡಿಕೆಶಿ ಹೈಕೋರ್ಟ್ ಮೊರೆ ಹೋಗಿದ್ದರು.
ವಿಚಾರಣೆ ನಡೆಸಿದ್ದ ಹೈಕೋರ್ಟ್ ಡಿ.ಕೆ.ಶಿವಕುಮಾರ್ ವಿರುದ್ಧದ ಐಟಿ ತನಿಖೆಗೆ ತಡೆ ನೀಡಿ ಆದೇಶ ಹೊರಡಿಸಿತ್ತು. ಬಳಿಕ ಐಟಿ ಅಧಿಕಾರಿಗಳು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದೀಗ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯಪೀಠ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ ಡಿ.ಕೆ. ಶಿವಕುಮಾರ್ ಅವರಿಗೆ ನೋಟೀಸ್ ಜಾರಿ ಮಾಡಿದೆ.