ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ವಿರುದ್ಧ ಹೊಸದಾಗಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
2019ರಲ್ಲಿ ದೆಹಲಿಯ ಡಿ.ಕೆ. ಶಿವಕುಮಾರ್ ನಿವಾಸದ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎರಡುವರೆ ವರ್ಷಗಳ ಬಳಿಕ ಇಡಿ ಅಧಿಕಾರಿಗಳು ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, ದೆಹಲಿಯ ವಿಶೇಷ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಒಂದು ವೇಳೆ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ಆರೋಪ ಸಾಬೀತಾದಲ್ಲಿ ಜೈಲುಶಿಕ್ಷೆ ಪ್ರಕಟವಾಗುವ ಸಾಧ್ಯತೆ ಇದ್ದು, 2023 ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಸಿಎಂ ಸ್ಥಾನದ ಆಕಾಂಕ್ಷಿಯಾಗಿರುವ ಡಿಕೆಶಿ ಕನಸಿಗೆ ಮುಳುವಾಗುವ ಸಾಧ್ಯತೆ ದಟ್ಟವಾಗಿದೆ.