ಮಹಾರಾಷ್ಟ್ರದಲ್ಲಿನ ರಾಜಕೀಯ ಬೆಳವಣಿಗೆ ಈಗ ಮತ್ತೊಂದು ತಿರುವನ್ನು ಪಡೆದುಕೊಂಡಿದ್ದು, ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಸಚಿವ ಏಕನಾಥ ಶಿಂಧೆ, ತಮ್ಮೊಂದಿಗೆ 50 ಶಾಸಕರು ಇದ್ದಾರೆಂದು ತಿಳಿಸಿದ್ದಾರೆ.
ಅಸ್ಸಾಂನ ಗುವಾಹಟಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಶಾಸಕರೆಲ್ಲರೂ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಗೆ ವಿರುದ್ಧವಾಗಿದ್ದು, ಸದ್ಯದಲ್ಲೇ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಇತ್ತ ಮಾಜಿ ಮುಖ್ಯಮಂತ್ರಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ನವದೆಹಲಿಗೆ ದೌಡಾಯಿಸಿದ್ದು, ಪಕ್ಷದ ವರಿಷ್ಠರನ್ನು ಭೇಟಿಯಾಗಿ ಮುಂದೆ ಕೈಗೊಳ್ಳಬೇಕಾದ ತೀರ್ಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ.