alex Certify BIG BREAKING: ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ; ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಜೀವನದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ; ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಜೀವನದಿ

ಮಡಿಕೇರಿ: ಕೊಡಗು ಜಿಲ್ಲೆ ಮಡಿಕೇರಿಯ ತಲಕಾವೇರಿಯಲ್ಲಿ ಕರುನಾಡ ಜೀವನದಿ ಕಾವೇರಿ ತೀರ್ಥರೂಪಿಣಿಯಾಗಿ ಉದ್ಭವಿಸಿದ್ದು, ಪುಣ್ಯಕ್ಷೇತ್ರದಲ್ಲಿ ಸಂಭ್ರಮ ಮನೆ ಮಾಡಿದೆ.

ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಮಧ್ಯಾಹ್ನ 1:11ರ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದಾಳೆ. ಭಕ್ತ ಜನ ಸಾಗರ ಪವಿತ್ರ ಜೀವನದಿಯ ತೀರ್ಥೋದ್ಭವವನ್ನು ಕಣ್ತುಂಬಿಕೊಂಡಿದ್ದಾರೆ.

ಸೂರ್ಯ ಕನ್ಯಾರಾಶಿಯಿಂದ ತುಲಾರಾಶಿಗೆ ಪ್ರವೇಶ ಮಾಡಲಿದ್ದು, ಆ ಸಂದರ್ಭದಲ್ಲಿ ಕಾವೇರಿ ತೀರ್ಥೋದ್ಭವವಾಗಲಿದೆ ಎಂಬುದು ನಂಬಿಕೆ.

RSS ಕೋಮುವಾದಿ ಸಂಘಟನೆ; ಸಂಘ ಪರಿವಾರದ ವಿರುದ್ಧ ಮತ್ತೆ ಕಿಡಿಕಾರಿದ ಸಿದ್ದರಾಮಯ್ಯ

ಕಾವೇರಿ ತೀರ್ಥೋದ್ಭವ ಹಿನ್ನೆಲೆಯಲ್ಲಿ ಬೆಳಿಗ್ಗೆ 11 ಗಂಟೆ ಬಳಿಕ ಕುಂಡಿಕೆ ಬಳಿ ಭಕ್ತರಿಗೆ ನಿಷೇಧ ಹೇರಲಾಗಿದೆ. ತೀರ್ಥೋದ್ಭವ ಸಂದರ್ಭದಲ್ಲಿ 6 ಅರ್ಚಕರಿಂದ ವಿಶೇಷ ಪೂಜೆ, ಧಾರ್ಮಿಕ ಕೈಂಕರ್ಯಗಳು ನಡೆದವು.

ಇನ್ನು ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿ ಸಾಕಷ್ಟು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ತೀರ್ಥೋದ್ಭವದ ಸಂದರ್ಭದಲ್ಲಿ ಕಲ್ಯಾಣಿಗೆ ಇಳಿದು ಪುಣ್ಯ ಸ್ನಾನ ಮಾಡುವಂತಿಲ್ಲ. ಭಕ್ತರಿಗೆ ತೀರ್ಥ ವಿತರಣೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಇನ್ನು ಇಂದಿನಿಂದ ಒಂದು ತಿಂಗಳ ಕಾಲ ತಲಕಾವೇರಿಯಲ್ಲಿ ಜಾತ್ರೋತ್ಸವ ನಡೆಯಲಿದ್ದು, ತಲಕಾವೇರಿ, ಭಾಗಮಂಡಲದಲ್ಲಿ ಭದ್ರತೆಗೆ ಕೆ ಎಸ್ ಆರ್ ಪಿ, ಡಿಆರ್ ಪೊಲೀಸರನ್ನು ನಿಯೋಜಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...