alex Certify BIG BREAKING: ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ‘ಜಾಮೀನು’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದೆಹಲಿ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ‘ಜಾಮೀನು’

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಆಮ್ ಆದ್ಮಿ ಪಕ್ಷದ ಮಾಜಿ ಸಚಿವ ಸತ್ಯೇಂದ್ರ ಜೈನ್ ಅವರಿಗೆ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಸತ್ಯೇಂದ್ರ ಜೈನ್ ಪ್ರಸ್ತುತ ಆಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ವೈದ್ಯಕೀಯ ಪರಿಸ್ಥಿತಿಯನ್ನು ಆಧರಿಸಿ ಜಾಮೀನು ನೀಡಲಾಗಿದೆ.

ಜೈಲಿನ ಬಾತ್ರೂಮಿನಲ್ಲಿ ಕಾಲು ಜಾರಿ ಬಿದ್ದಿದ್ದ ಸತ್ಯೇಂದ್ರ ಜೈನ್ ತೀವ್ರ ಅಸ್ವಸ್ಥಗೊಂಡಿದ್ದರು. ಅಲ್ಲದೆ ತಮಗೆ ಮನೆ ಆಹಾರ ನಿರಾಕರಿಸಿರುವ ಕಾರಣ ಆರೋಗ್ಯದಲ್ಲಿ ವ್ಯತ್ಯಯವಾಗಿದೆ ಎಂದು ಈ ಹಿಂದೆ ಆರೋಪಿಸಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...