alex Certify BIG BREAKING: ದೇಶದಲ್ಲಿ ಕೊರೊನಾ ಮಹಾಸ್ಫೋಟ; ದಿನದಿಂದ ದಿನಕ್ಕೆ ಏರುತ್ತಲೇ ಇದೆ ಸೋಂಕಿತರ ಸಂಖ್ಯೆ; ಒಂದೇ ದಿನ 146 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದೇಶದಲ್ಲಿ ಕೊರೊನಾ ಮಹಾಸ್ಫೋಟ; ದಿನದಿಂದ ದಿನಕ್ಕೆ ಏರುತ್ತಲೇ ಇದೆ ಸೋಂಕಿತರ ಸಂಖ್ಯೆ; ಒಂದೇ ದಿನ 146 ಜನ ಮಹಾಮಾರಿಗೆ ಬಲಿ

ನವದೆಹಲಿ: ರೂಪಾಂತರಿ ವೈರಸ್ ಒಮಿಕ್ರಾನ್ ಅಟ್ಟಹಾಸದ ನಡುವೆಯೇ ದೇಶಾದ್ಯಂತ ಕೊರೊನಾ ಸ್ಫೋಟಗೊಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,79,723 ಜನರಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದೆ. ದಿನದ ಕೋವಿಡ್ ಪಾಸಿಟಿವ್ ರೇಟ್ ಶೇ.9.28ಕ್ಕೆ ಏರಿಕೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ನಿನ್ನೆಗಿಂತ ಕುಸಿತವಾಗಿದ್ದು, 24 ಗಂಟೆಯಲ್ಲಿ 146 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 483936 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 723619 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 46569 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 34500172 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 13,52,717 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 29,60,975 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 1,51,94,05,951 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...