alex Certify BIG BREAKING: ದೇಶದಲ್ಲಿ ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 15,823 ಜನರಲ್ಲಿ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದೇಶದಲ್ಲಿ ತಗ್ಗಿದ ಕೊರೊನಾ ಸೋಂಕಿತರ ಸಂಖ್ಯೆ; 24 ಗಂಟೆಯಲ್ಲಿ 15,823 ಜನರಲ್ಲಿ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಮಹಾಮಾರಿ ಕೋವಿಡ್ ಅಟ್ಟಹಾಸ ದಿನದಿಂದ ದಿನಕ್ಕೆ ತಗ್ಗುತ್ತಿದ್ದು, ಸೋಂಕಿತರ ಸಂಖ್ಯೆಯಲ್ಲಿ ಕುಸಿತ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ 15,823 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,40,01,743ಕ್ಕೆ ಏರಿಕೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ 226 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 451189 ಕ್ಕೆ ಏರಿಕೆಯಾಗಿದೆ.

ಮಕ್ಕಳ ಶಾಲಾ ಶುಲ್ಕ ಕಟ್ಟುವ ಆತಂಕದಲ್ಲಿದ್ದ ಪೋಷಕರಿಗೆ ಗುಡ್ ನ್ಯೂಸ್

ಇನ್ನು ದೇಶದಲ್ಲಿ 207653 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 22844 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 33342901 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ದೇಶದಲ್ಲಿ 13,25,399 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, 24 ಗಂಟೆಯಲ್ಲಿ 50,63,845 ಜನರಿಗೆ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ ಒಟ್ಟು 96,43,79,212 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...