ದೇಶದ ಅತಿ ದೊಡ್ಡ ಉದ್ಯೋಗ ಮೇಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಚಾಲನೆ ನೀಡಿದ್ದು, ಕೇಂದ್ರ ಸಚಿವಾಲಯದ ವಿವಿಧ ಹುದ್ದೆಗಳಲ್ಲಿ ನೇಮಕಾತಿ ಹೊಂದಿರುವ 75,000 ಮಂದಿಗೆ ಏಕಕಾಲದಲ್ಲಿ ನೇಮಕಾತಿ ಪತ್ರ ವಿತರಿಸಲಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಉದ್ಯೋಗ ಮೇಳಕ್ಕೆ ಚಾಲನೆ ನೀಡಲಾಗಿದ್ದು, ಬಳಿಕ ವಿವಿಧ ಪ್ರದೇಶಗಳಿಂದ ಇದರಲ್ಲಿ ಪಾಲ್ಗೊಂಡಿರುವ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರುಗಳು ಸಹ ಹಾಜರಿದ್ದಾರೆ.
ಈ ಹಿಂದೆ ನರೇಂದ್ರ ಮೋದಿಯವರು 10 ಲಕ್ಷ ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡುವುದಾಗಿ ಭರವಸೆ ನೀಡಿದ್ದು, ವಿವಿಧ ಸಚಿವಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಪಟ್ಟಿ ಮಾಡುವಂತೆ ಸೂಚಿಸಿದ್ದರು. ಇದೀಗ ಮೊದಲ ಹಂತದಲ್ಲಿ 75,000 ಮಂದಿಗೆ ಉದ್ಯೋಗ ಸಿಗುತ್ತಿದ್ದು, ಇವರುಗಳು ರೈಲ್ವೆ, ರಕ್ಷಣೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸಲಿದ್ದಾರೆ.