alex Certify BIG BREAKING: ದ್ವಿತೀಯ ಪಿಯು ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ; ದಕ್ಷಿಣ ಕನ್ನಡ ಮೊದಲ ಸ್ಥಾನ, ಚಿತ್ರದುರ್ಗ ಜಿಲ್ಲೆ ಕೊನೇ ಸ್ಥಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ದ್ವಿತೀಯ ಪಿಯು ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ; ದಕ್ಷಿಣ ಕನ್ನಡ ಮೊದಲ ಸ್ಥಾನ, ಚಿತ್ರದುರ್ಗ ಜಿಲ್ಲೆ ಕೊನೇ ಸ್ಥಾನ

ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪ್ರತಿಬಾರಿಯಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಬೆಂಗಳೂರಿನ ಪಿಯು ಬೋರ್ಡ್ ನಲ್ಲಿ ಸುದ್ದಿಗೋಷ್ಠಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದಾರೆ. 5,99,794 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 4,02,697 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಒಟ್ಟು 61.88% ಮಕ್ಕಳು ತೇರ್ಗಡೆಯಾಗಿದ್ದಾರೆ ಎಂದು ತಿಳಿಸಿದರು.

ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮೊದಲ ಸ್ಥಾನ, ಉಡುಪಿ ಜಿಲ್ಲೆ 2ನೇ ಸ್ಥಾನ, ವಿಜಯಪುರ ಜಿಲ್ಲೆ ಮೂರನೇ ಸ್ಥಾನ, ಬೆಂಗಳೂರು ದಕ್ಷಿಣ 4, ಉತ್ತರ ಕನ್ನಡ 5 ಹಾಗೂ ಚಿತ್ರದುರ್ಗ ಕೊನೇ ಸ್ಥಾನ ಪಡೆದಿದೆ.

ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ವಿದ್ಯಾರ್ಥಿಗಳು ಎಸ್ಎಂಎಸ್ ಮೂಲಕವೂ ಫಲಿತಾಂಶ ವೀಕ್ಷಿಸಬಹುದು. KAR12-ಸ್ಪೇಸ್-ನೋಂದಣಿ ಸಂಖ್ಯೆ ನಮೂದಿಸಿ 56263ಗೆ SMS ಕಳುಹಿಸಿ ಫಲಿತಾಂಶ ಪಡೆದುಕೊಳ್ಳಬಹುದು.

ಇನ್ನು ಫಲಿತಾಂಶಕ್ಕಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್
www.kseeb.kar.nic.in
www.pue.kar.nic.in
www.karresults.nic.in
www.result.dkpucpa.co ಗೆ ಭೇಟಿ ನೀಡಿ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...