ಬೆಂಗಳೂರು: ಸ್ಯಾಂಡಲ್ ವುಡ್ ನಟ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.
ಜಿಮ್ ವರ್ಕೌಟ್ ಮಾಡುವ ವೇಳೆ ನಿನ್ನೆಯೇ ಎದೆ ನೋವು ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು ಎನ್ನಲಾಗಿದೆ. ಇಂದು ಬೆಳಿಗ್ಗೆ ಅವರ ಆರೋಗ್ಯದಲ್ಲಿ ಇನ್ನಷ್ಟು ಏರುಪೇರಾಗಿದ್ದು ಅವರನ್ನು ತಕ್ಷಣ ರಮಣಶ್ರೀ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಇತ್ತೀಚಿನ ಮಾಹಿತಿ ಪ್ರಕಾರ ಪುನೀತ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವಿಕ್ರಂ ಆಸ್ಪತ್ರೆಯಲ್ಲಿ ಐಸಿಯು ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಕೆಲ ಸಮಯದಲ್ಲಿ ಆಸ್ಪತ್ರೆ ವೈದ್ಯರ ತಂಡ ಪುನೀತ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡುವ ನಿರೀಕ್ಷೆ ಇದೆ.
ಪುನೀತ್ ರಾಜ್ ಕುಮಾರ್ ಪತ್ನಿ, ಮಕ್ಕಳು ಹಾಗೂ ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಕುಟುಂಬಸ್ಥರು ವಿಕ್ರಂ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ವಿಕ್ರಂ ಆಸ್ಪತ್ರೆ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ.