
ಇಂದು ಬೆಳಿಗ್ಗೆ ಕಚೇರಿ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಬಿಸಿ ಸಿಬ್ಬಂದಿಯ ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಅಲ್ಲದೆ ಹಲವು ಸಿಬ್ಬಂದಿಗಳನ್ನು ಮನೆಗೆ ತೆರಳುವಂತೆ ಸೂಚಿಸಲಾಗಿದ್ದು, ಹಿರಿಯ ಅಧಿಕಾರಿಗಳಿಂದ ಕಡತಗಳನ್ನು ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.