
ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಕುಸಿತವಾಗಿದ್ದು, 24 ಗಂಟೆಯಲ್ಲಿ 26 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,23,869 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 19,500 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 2,723 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,25,38,976 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 4,02,170 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,89,23,98,347 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 2,95,588 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.