alex Certify BIG BREAKING: ನಿನ್ನೆಗಿಂತ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಿನ್ನೆಗಿಂತ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ನಾಲ್ಕನೆ ಅಲೆ ಆತಂಕ ದಿನೇ ದಿನೆ ಹೆಚ್ಚುತ್ತಿದೆ. ಈ ಮಧ್ಯೆ ಕಳೆದ 24 ಗಂಟೆಯಲ್ಲಿ 17,070 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ನಿನ್ನೆಗಿಂತ ಕೊಂಚ ಕಡಿಮೆ ಪ್ರಮಾಣದಲ್ಲಿ ಇಂದು ಸೋಂಕಿತರ ಕೇಸ್ ದಾಖಲಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಇಂದು ಕುಸಿತಕಂಡಿದ್ದು, 24 ಗಂಟೆಯಲ್ಲಿ 23 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,25,116 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1,07,189 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 14,413 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,28,36,906 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 11,67,503 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,97,74,71,041 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 5,02,150 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...