alex Certify BIG BREAKING: ನಿನ್ನೆಗಿಂತ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಿನ್ನೆಗಿಂತ ಕುಸಿತ ಕಂಡ ಕೊರೊನಾ ಸೋಂಕಿತರ ಸಂಖ್ಯೆ; ಆದರೆ ಸಾವಿನ ಸಂಖ್ಯೆಯಲ್ಲಿ ಏರಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ನಿನ್ನೆಗಿಂತ ಕೊಂಚ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ 2,58,089 ಲಕ್ಷ ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 385 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 486451 ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 1656341 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 151740 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 35237461 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ 39,46,348 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,57,20,41,825 ಜನರಿಗೆ ಲಸಿಕೆ ಹಾಕಲಾಗಿದೆ. ನಿನ್ನೆ 13,13,444 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...