ಮುಂಬೈ: ಕೇಂದ್ರ ಸಚಿವ ನಾರಾಯಣ ರಾಣೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರತ್ನಗಿರಿ ನ್ಯಾಯಾಲಯಯ ತಿರಸ್ಕರಿಸಿದ್ದು, ಸಚಿವರಿಗೆ ಬಂಧನ ಭೀತಿ ಎದುರಾಗಿದೆ.
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ನಾರಾಯಣ ರಾಣೆ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಕೋರ್ಟ್ ಮೊರೆ ಹೋಗಿದ್ದ ರಾಣೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದೀಗ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ವಾರದ ಯಾವ ದಿನ ಉಗುರು ಕತ್ತರಿಸಿದ್ರೆ ನಷ್ಟ…? ಯಾವ ದಿನ ಲಾಭ…?
ಈ ಹಿನ್ನೆಲೆಯಲ್ಲಿ ನಾಸಿಕ್ ಪೊಲೀಸರು ನಾರಾಯಣ ರಾಣೆ ಬಂಧನಕ್ಕೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.