2016ರ ಅಮೆರಿಕ ಅಧ್ಯಕ್ಷೀಯ ಚುನಾವಣೆ ವೇಳೆ ತಾವು ಸಂಬಂಧ ಹೊಂದಿದ್ದ ವಿಷಯವನ್ನು ಬಹಿರಂಗಪಡಿಸದಂತೆ ನೀಲಿ ಚಿತ್ರ ತಾರೆಗೆ ಭಾರಿ ಮೊತ್ತದ ಆಮಿಷ ಒಡ್ಡಿದ್ದ ಆರೋಪದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ತಪ್ಪಿತಸ್ಥ ಎಂದು ನ್ಯೂಯಾರ್ಕ್ ನ್ಯಾಯಾಲಯ ತೀರ್ಪು ನೀಡಿದೆ.
ಆಮಿಷದ ನಡುವೆಯೂ ನೀಲಿ ಚಿತ್ರ ತಾರೆ, ತಮ್ಮ ಮತ್ತು ಡೊನಾಲ್ಡ್ ಟ್ರಂಪ್ ನಡುವಿನ ಸಂಬಂಧದ ವಿಷಯವನ್ನು ಬಹಿರಂಗಪಡಿಸಿದ್ದರು. ಆಕೆಗೆ ಆಮಿಷ ಒಡ್ಡಿದ್ದ ಕುರಿತಂತೆ ಡೊನಾಲ್ಡ್ ಟ್ರಂಪ್ ವಿರುದ್ಧ ಒಟ್ಟು 34 ಪ್ರಕರಣಗಳು ದಾಖಲಾಗಿದ್ದು, ಎಲ್ಲ ಪ್ರಕರಣಗಳಲ್ಲೂ ತಪ್ಪಿತಸ್ಥ ಎಂದು ನ್ಯೂಯಾರ್ಕ್ ನ್ಯಾಯಾಲಯ ತನ್ನ ತೀರ್ಪಿನಲ್ಲಿ ತಿಳಿಸಿದೆ.