ನವದೆಹಲಿ: ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಸಡಿಲ ನಾಲಿಗೆಯಿಂದ ಇಡೀ ದೇಶಕ್ಕೆ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಿ ಎಂದು ಬೆವರಿಳಿಸಿದೆ.
ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ವಿರುದ್ಧ ದೇಶದ ಹಲವೆಡೆಗಳಲ್ಲಿ ಪ್ರಕರಣ ದಾಖಲಾಗಿತ್ತು. ತನ್ನ ವಿರುದ್ಧದ ಎಲ್ಲಾ ಕೇಸ್ ಗಳನ್ನು ದೆಹಲಿಗೆ ವರ್ಗಾಯಿಸುವಂತೆ ನೂಪುರ್ ಶರ್ಮಾ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಇದೀಗ ನೂಪುರ್ ಅರ್ಜಿ ವಿಚರಣೆ ನಡೆಸಿರುವ ಸುಪ್ರೀಂ ಕೋರ್ಟ್, ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ದೇಶದಲ್ಲಿ ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಿ. ಉದಯ್ ಪುರ ಟೈಲರ್ ಹತ್ಯೆಗೆ ನಿಮ್ಮ ಹೇಳಿಕೆಯೇ ಕಾರಣ. ನಿಮ್ಮ ಹೇಳಿಕೆ ರಾಷ್ಟ್ರದ ಭದ್ರತೆಗೆ ಬೆದರಿಕೆಯಾಗಿದೆ. ತಕ್ಷಣ ಇಡೀ ದೇಶದ ಕ್ಷಮೆಯಾಚಿಸಿ ಎಂದು ಸೂಚಿಸಿದೆ.