
ನೆರೆ ರಾಷ್ಡ್ರ ನೇಪಾಳದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆ ದಾಖಲಾಗಿದೆ ಎಂದು ತಿಳಿದುಬಂದಿದೆ.
ಈ ಭೂಕಂಪನದಿಂದ ಹೆಚ್ಚಿನ ಹಾನಿ ಸಂಭವಿಸಿದೆಯಾ ಇಲ್ಲವಾ ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.
ಭೂಕಂಪನವಾಗುತ್ತಿದ್ದಂತೆಯೇ ಮನೆಗಳಿಂದ ಓಡೋಡಿ ಜನ ರಸ್ತೆಗೆ ಬಂದಿದ್ದಾರೆ. ಭಾನುವಾರ ಬೆಳಿಗ್ಗೆ 8.13 ರ ಸುಮಾರಿಗೆ ಈ ಭೂಕಂಪನ ಸಂಭವಿಸಿದೆ.
ನೇಪಾಳ ರಾಜಧಾನಿ ಕಠ್ಮಂಡುವಿನಿಂದ 147 ಕಿ.ಮೀ. ದೂರದಲ್ಲಿ ಭೂಕಂಪನದ ಕೇಂದ್ರಬಿಂದುವಿದೆ ಎಂದು ಹೇಳಲಾಗಿದೆ.