alex Certify BIG BREAKING: ನೇಪಾಳ ವಿಮಾನ ನಾಪತ್ತೆ ಪ್ರಕರಣ ದುರಂತದಲ್ಲಿ ಅಂತ್ಯ; 6 ಮಂದಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನೇಪಾಳ ವಿಮಾನ ನಾಪತ್ತೆ ಪ್ರಕರಣ ದುರಂತದಲ್ಲಿ ಅಂತ್ಯ; 6 ಮಂದಿ ಸಾವು

ನೇಪಾಳದ Solukhumbu ನಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಇಂದು ಬೆಳಗ್ಗೆ 10 ಗಂಟೆಗೆ ಸುಮಾರಿಗೆ ನಾಪತ್ತೆಯಾಗಿದ್ದು, ಇದೀಗ ಇದರ ಅವಶೇಷಗಳು ಗುಡ್ಡಗಾಡು ಪ್ರದೇಶದಲ್ಲಿ ಪತ್ತೆಯಾಗಿದೆ.

ಈ ಹೆಲಿಕಾಪ್ಟರ್ ನಲ್ಲಿ ಐದು ಮಂದಿ ವಿದೇಶಿಯರೂ ಸೇರಿದಂತೆ ಒಟ್ಟು ಆರು ಮಂದಿ ಇದ್ದು, ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆದರೆ ಈ ಕುರಿತು ಈವರೆಗೆ ಅಧಿಕೃತ ಪ್ರಕಟಣೆ ಹೊರ ಬಿದ್ದಿಲ್ಲ.

ಹಾರಾಟ ಆರಂಭಿಸಿದ್ದ ಈ ಹೆಲಿಕಾಪ್ಟರ್ ಬೆಳಗ್ಗೆ 10 ಗಂಟೆ ಸುಮಾರಿಗೆ ಕಂಟ್ರೋಲ್ ಟವರ್ ರೆಡಾರ್ ನಿಂದ ಸಂಪರ್ಕ ಕಳೆದುಕೊಂಡಿದ್ದು, ಬಳಿಕ ಪತನಗೊಂಡಿರುವುದು ಬೆಳಕಿಗೆ ಬಂದಿದೆ. ಹೆಲಿಕಾಪ್ಟರ್ ನ ಅವಶೇಷ ಹಾಗೂ ಪ್ರಯಾಣಿಕರ ಮೃತ ದೇಹದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...