
ಪ್ರಸ್ತುತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರು ಕರ್ನಾಟಕ ರಾಜ್ಯ ಉಪಲೋಕಾಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ಅವರನ್ನು ರಾಜ್ಯದ ಲೋಕಾಯುಕ್ತರನ್ನಾಗಿ ನೇಮಕ ಮಾಡುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಈ ಶಿಫಾರಸಿನ ಅನ್ವಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಲೋಕಾಯುಕ್ತರನ್ನಾಗಿ ನೇಮಕ ಮಾಡಿ ಇಂದು ಆದೇಶ ಹೊರಡಿಸಿದ್ದಾರೆ.