
ಮುಖ್ಯಮಂತ್ರಿಗಳಾಗಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರೋಧದ ನಡುವೆಯೂ ನವಜೋತ್ ಸಿಂಗ್ ಸಿಧು, ಪಂಜಾಬ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಇದಾದ ಕೆಲ ದಿನಗಳ ಬಳಿಕ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಅಮರಿಂದರ್ ಸಿಂಗ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ಅಮರಿಂದರ್ ಸಿಂಗ್, ಸಿಧು ವಿರುದ್ದ ತಮ್ಮ ಅಸಮಾಧಾನ ತೋಡಿಕೊಂಡಿದ್ದರು.
ಇದೀಗ ನವಜೋತ್ ಸಿಂಗ್ ಸಿಧು ಪಂಜಾಬ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಂಜಾಬ್ ವಿಧಾನಸಭಾ ಚುನಾವನೆ ನಡೆಯುತ್ತಿರುವ ಸಂದರ್ಭದಲ್ಲಿ ನಡೆದಿರುವ ಈ ಬೆಳವಣಿಗೆ ಅಚ್ಚರಿ ಮೂಡಿಸಿದೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕ್ಯಾಪ್ಟನ್ ಅಮರಿಂದರ್ ಸಿಂಗ್, ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡುತ್ತಿದ್ದಾರೆಂಬ ವದಂತಿ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
— ANI (@ANI) September 28, 2021
