ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವದಂತಿಗಳು ಭಾರಿ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ನೀಡಲು ದಿನಾಂಕ ನಿಗದಿ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಕಳೆದ ಎರಡು ದಿನಗಳಿಂದ ಸಾಲು ಸಾಲು ಮಠಾಧೀಶರು ಸಿಎಂ ಭೇಟಿಯಾಗಿ ಚರ್ಚೆ ನಡೆಸಿದ್ದು, ಸ್ವಾಮೀಜಿಗಳ ಬಳಿ ಮನದಾಳದ ಮಾತು ಹೇಳಿಕೊಂಡಿರುವ ಯಡಿಯೂರಪ್ಪ, ಹೈಕಮಾಂಡ್ ನಿರ್ಧಾರವೇ ಅಂತಿಮ. ತಮ್ಮ ಕೈಲಿ ಏನೂ ಇಲ್ಲ ಎಂಬ ಮಾತುಗಳನ್ನು ಆಡಿದ್ದಾರೆ. ಈ ಮೂಲಕ ಸಿಎಂ ಬಿ.ಎಸ್.ವೈ. ರಾಜೀನಾಮೆಗೆ ವರಿಷ್ಠರು ಪರೋಕ್ಷ ಸಂದೇಶ ನೀಡಿದ್ದಾರಾ..? ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಅಲ್ಲದೇ ಯಡಿಯೂರಪ್ಪನವರಿಗೆ ಪೂರ್ಣಾವಧಿ ಮುಗಿಸಲು ಅವಕಾಶ ನೀಡುವಂತೆ ಮಠಾಧೀಶರು ಕೇಳುತ್ತಿದ್ದರೂ ಹೈಕಮಾಂಡ್ ಈ ಬಗ್ಗೆ ಗಮನಹರಿಸಿಲ್ಲವೇ ಎಂಬ ಪ್ರಶ್ನೆ ಕೂಡ ಮೂಡಿದೆ.
BIG BREAKING NEWS: ರಾಜ್ಯದಲ್ಲಿ ಶಾಲೆ ಆರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಮಹತ್ವದ ಮಾಹಿತಿ
ಜುಲೈ 26 ಅಥವಾ 28ಕ್ಕೆ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಯೋಚಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೊಂದೆಡೆ ಯಡಿಯೂರಪ್ಪ ಪದತ್ಯಾಗ ಮಾಡಿದರೆ ಮುಂದೆ ಯಾರಿಗೆ ಸಿಎಂ ಪಟ್ಟ ಕಟ್ಟಬೇಕು ಎಂಬ ನಿಟ್ಟಿನಲ್ಲೂ ಚರ್ಚೆ ನಡೆದಿದ್ದು, ಪಕ್ಷಕ್ಕೆ ಸಂಪನ್ಮೂಲ ಒದಗಿಸುವ ವ್ಯಕ್ತಿಗಳತ್ತ ಗಮನಹರಿಸಲಾಗಿದ್ದು, ಈ ನಿಟ್ಟಿನಲ್ಲಿ ಪ್ರಹ್ಲಾದ್ ಜೋಶಿ, ಮುರುಗೇಶ್ ನಿರಾಣಿ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ, ಅರವಿಂದ್ ಬೆಲ್ಲದ್ ಹೆಸರು ಕೂಡ ಕೇಳಿಬರುತ್ತಿದೆ.