ಸಂತ್ರಸ್ತೆ ಕಿಡ್ನಾಪ್ ಮಾಡಿದ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಕಸ್ಟಡಿ ಇಂದು ಅಂತ್ಯವಾಗಿದ್ದು ಈ ಹಿನ್ನಲೆಯಲ್ಲಿ ಅವರು ಜಾಮೀನು ಕೋರಿ 17ನೇ ಎಸಿಎಂಎಂ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.
ಇದರ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ರವೀಂದ್ರ ಬಿ. ಕಟ್ಟಿಮನಿ ಇದೀಗ ರೇವಣ್ಣ ಅವರಿಗೆ ಮೇ 14ರ ವರೆಗೆ ಅಂದರೆ 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದು, ಹೀಗಾಗಿ ರೇವಣ್ಣ ಪರಪ್ಪನ ಅಗ್ರಹಾರ ಸೇರಬೇಕಿದೆ.
ಮಾಜಿ ಸಚಿವ ರೇವಣ್ಣ ಅವರ ಪರ ಸಿ ವಿ ನಾಗೇಶ್ ವಕಾಲತ್ತು ವಹಿಸಿದ್ದರೆ ಎಸ್ಐಟಿ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಜಗದೀಶ್ ವಾದ ಮಂಡಿಸಿದ್ದರು. ಎಸ್ಐಟಿ ರೇವಣ್ಣ ವಿಚಾರಣೆಗೆ ಸಹಕರಿಸುತ್ತಿಲ್ಲ. ಅಲ್ಲದೆ ಸಾಕ್ಷ್ಯ ನಾಶ ಮಾಡುವ ಸಾಧ್ಯತೆಗಳಿವೆ. ಹೀಗಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಕೇಳಿದ್ದು, ನ್ಯಾಯಾಧೀಶರು ಏಳು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.