ಬೆಂಗಳೂರು: ಜೈಲಿನಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಮುಖ್ಯ ಜೈಲಧಿಕಾರಿ ರಂಗನಾಥ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪರಪ್ಪನ ಕೇಂದ್ರ ಕಾರಾಗೃಹದಿಂದ ಕಲಬುರ್ಗಿ ಜೈಲಿಗೆ ರಂಗನಾಥ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಪರಪ್ಪನ ಅಗ್ರಹಾರ ಜೈಲಧಿಕಾರಿಯಾಗಿ ರಮೇಶ್ ಅವರನ್ನು ನೇಮಕ ಮಾಡಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮಗಳ ಬಗ್ಗೆ ಕೇಳಿಬಂದ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದೆ 7 ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿತ್ತು. ಇದೀಗ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನೇ ವರ್ಗಾವಣೆ ಮಾಡಲಾಗಿದೆ.