ಕಳೆದ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯ ಮೇಲಿನಪೇಟೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆಯಾಗಿದ್ದು, ಇಂದು ಅವರ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಹತ್ಯೆಯನ್ನು ಖಂಡಿಸಿ ಹಿಂದೂ ಕಾರ್ಯಕರ್ತರ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಾರಿಯುದ್ದಕ್ಕೂ ಘೋಷಣೆಗಳನ್ನು ಕೂಗಿಕೊಂಡು ಬಂದ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕಟೀಲ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆಯುತ್ತಿರುವ ಹಿಂದೂಗಳ ಹತ್ಯೆಗೆ ಕೊನೆ ಇಲ್ಲವೇ ಎಂದು ಆಕ್ರೋಶಭರಿತರಾಗಿ ಪ್ರಶ್ನಿಸಿದ್ದಾರೆ.
ಬಳಿಕ ಕೆಲವರು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಆಗ ಓರ್ವ ಹಿಂದೂ ಕಾರ್ಯಕರ್ತನ ತಲೆಗೆ ಏಟು ಬಿದ್ದಿದ್ದು, ಆತನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಸ್ಥಳದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ಗುಂಪು ಚದುರಿಸುವ ಪ್ರಯತ್ನ ನಡೆಸಿದ್ದಾರೆ.