alex Certify BIG BREAKING: ಪಾಗಲ್ ಪ್ರೇಮಿಯಿಂದ ಯುವತಿ ಮೇಲೆ ಆಸಿಡ್ ದಾಳಿ; ಸಿಲಿಕಾನ್ ಸಿಟಿಯಲ್ಲಿ ಹೃದಯವಿದ್ರಾವಕ ಘಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪಾಗಲ್ ಪ್ರೇಮಿಯಿಂದ ಯುವತಿ ಮೇಲೆ ಆಸಿಡ್ ದಾಳಿ; ಸಿಲಿಕಾನ್ ಸಿಟಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಂಗಳೂರು: ಪಾಗಲ್ ಪ್ರೇಮಿಯೊಬ್ಬ ಯುವತಿಯ ಮೇಲೆ ಆಸಿಡ್ ದಾಳಿ ನಡೆಸಿ ವಿಕೃತಿ ಮೆರೆದ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಯುವತಿ ಮನೆಯಿಂದ ಕೆಲಸಕ್ಕೆಂದು ಕಚೇರಿಗೆ ಹೋಗುತ್ತಿದ್ದಾಗ ಬೆಂಗಳೂರಿನ ಸುಂಕದ ಕಟ್ಟೆಯ ಬಳಿ ಯುವಕ, ಯುವತಿ ಮೇಲೆ ಆಸಿಡ್ ಎರಚಿ ಪರಾರಿಯಾಗಿದ್ದಾನೆ. ಆಸಿಡ್ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ತನ್ನನ್ನು ಪ್ರೀತಿಸುವಂತೆ ಹಲವು ದಿನಗಳಿಂದ ಪಾಗಲ್ ಪ್ರೇಮಿ ಯುವತಿ ಹಿಂದೆ ಬಿದ್ದಿದ್ದ. ಆದರೆ ಯುವತಿ ನಿರಾಕರಿಸಿದ್ದಳು. ಇದೇ ಕಾರಣಕ್ಕೆ ಸೇಡಿನಿಂದ ಯುವಕ ಯುವತಿ ಮೇಲೆ ಆಸಿಡ್ ದಾಳಿ ನಡೆಸಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...