ಬೆಂಗಳೂರು: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಆಫ್ರಿಕನ್ ಪ್ರಜೆಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಘಟನೆ ಬೆಂಗಳೂರಿನ ಜೆ.ಸಿ.ನಗರ ಠಾಣೆ ಎದುರು ನಡೆದಿದೆ.
ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಆಫ್ರಿಕನ್ ಪ್ರಜೆ ಪೊಲೀಸ್ ವಶದಲ್ಲಿದ್ದಾಗಲೇ ಅನಾರೋಗ್ಯದಿಂದ ಸಾವನ್ನಪ್ಪಿದ್ದ. ಇದರಿಂದ ಆತನ ಸ್ನೇಹಿತರು, ಸಂಬಂಧಿಕರು ಜೆ.ಸಿ.ನಗರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದು, ಪೊಲೀಸರೇ ಆತನನ್ನು ಹೊಡೆದು ಸಾಯಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.
ಆ.16ರಿಂದ ಶುರುವಾಗಲಿದೆ ಶಾಲೆ: ಕೊರೊನಾ ಪ್ರೋಟೋಕಾಲ್ ಕಡ್ಡಾಯ
ಧರಣಿ ವೇಳೆ ಆಫ್ರಿಕನ್ ಪ್ರಜೆಗಳು ವಾಗ್ವಾದ ನಡೆಸಿ, ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗುತ್ತಿದ್ದಂತೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ, ಆಫ್ರಿಕನ್ ಪ್ರಜೆಗಳನ್ನು ಬಂಧಿಸಿದ್ದಾರೆ.