alex Certify BIG BREAKING: ಪ್ರವೀಣ್ ಕುಟುಂಬಕ್ಕೆ ಸಾಂತ್ವನ; ನೆಟ್ಟಾರು ಗ್ರಾಮಕ್ಕೆ ಇಂದೇ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪ್ರವೀಣ್ ಕುಟುಂಬಕ್ಕೆ ಸಾಂತ್ವನ; ನೆಟ್ಟಾರು ಗ್ರಾಮಕ್ಕೆ ಇಂದೇ ಭೇಟಿ ನೀಡಲಿರುವ ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಇಂದು ನೆಟ್ಟಾರು ಗ್ರಾಮಕ್ಕೆ ಭೇಟಿ ನೀಡಿ, ಪ್ರವೀಣ್ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

ಇಂದು ಮಧ್ಯಾಹ್ನ 3.15ಕ್ಕೆ ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸಲಿರುವ ಸಿಎಂ ಬೊಮ್ಮಾಯಿ, ಮಂಗಳೂರಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮಕ್ಕೆ ರಸ್ತೆ ಮಾರ್ಗವಾಗಿ ತೆರಳಲಿದ್ದಾರೆ.

ಮೃತ ಪ್ರವೀಣ್ ನೆಟ್ಟಾರು ಕುಟುಂಬ ಸದಸ್ಯರನ್ನು ಭೇಟಿಯಾಗಲಿರುವ ಮುಖ್ಯಮಂತ್ರಿಗಳು, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಲಿದ್ದಾರೆ.

ಈ ನಡುವೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೆಟ್ಟಾರು ಗ್ರಾಮಕ್ಕೆ ಭೇಟಿ ನೀಡಿದ್ದು, ಮೃತ ಪ್ರವೀಣ್ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅಲ್ಲದೇ ಪ್ರವೀಣ್ ನೆಟ್ಟಾರು ಕುಟುಂಬ ಸದಸ್ಯರಿಗೆ ಸರ್ಕಾರಿ ಉದ್ಯೋಗದ ಬಗ್ಗೆ ಸರ್ಕಾರದ ಗಮನ ಸೆಳೆಯುವ ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...