
ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.
ಜಾಕೀರ್ ಸವಣೂರು ಹಾಗೂ ಶಫೀಕ್ ಬೆಳ್ಳಾರೆ ಬಂಧಿತ ಆರೋಪಿಗಳಾಗಿದ್ದು, ಇಬ್ಬರು ಕೂಡ ಬೆಳ್ಳಾರೆ ಮೂಲದವರೇ ಆಗಿದ್ದಾರೆ. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಒಟ್ಟು 21 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಅವರಲ್ಲಿ ಪ್ರಸ್ತುತ ಇಬ್ಬರನ್ನು ಬಂಧಿಸಲಾಗಿದ್ದು, ಬೇರೆ ಬೇರೆ ಆಯಾಮಗಳ ನಿಟ್ಟಿನಲ್ಲಿಯೂ ತನಿಖೆ ಮುಂದುವರೆದಿದೆ ಎಂದು ವಿವರಿಸಿದ್ದಾರೆ.