ಮುಂಬೈ: ಮಹಾ ವಿಕಾಸ್ ಅಘಾಡಿ ಸರ್ಕಾರದ ವಿರುದ್ಧ ಬಂಡಾಯವೆದ್ದು, ಉದ್ಧವ್ ಠಾಕ್ರೆ ನೇತೃತ್ವದ ಸರ್ಕಾರ ಪತನಕ್ಕೆ ಪ್ರಮುಖ ಕಾರಣರಾಗಿದ್ದ ಶಿವಸೇನೆ ನಾಯಕ ಏಕನಾಥ್ ಶಿಂಧೆ 10 ದಿನಗಳ ಬಳಿಕ ಮುಂಬೈಗೆ ಆಗಮಿಸಿದ್ದಾರೆ.
Z ಶ್ರೇಣಿ ಭದ್ರತೆಯಲ್ಲಿ ಗುವಾಹಟಿಯಿಂದ ವಿಶೇಷ ವಿಮಾನದಲ್ಲಿ ಮುಂಬೈಗೆ ಆಗಮಿಸಿದ ಏಕನಾಥ್ ಶಿಂಧೆ, ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರ ಮನೆಗೆ ತೆರಳಿದ್ದು, ಫಡ್ನವಿಸ್ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.
ಈಗಾಗಲೇ ಬಿಜೆಪಿಗೆ ಬೆಂಬಲ ಘೋಷಿಸಿರುವ ಶಿಂಧೆ, 49 ಶಾಸಕರ ಬೆಂಬಲದ ಪತ್ರದೊಂದಿಗೆ ಆಗಮಿಸಿದ್ದಾರೆ. ಫಡ್ನವಿಸ್ ಹಾಗೂ ಏಕನಾಥ್ ಶಿಂಧೆ ಇಬ್ಬರೂ ಸಂಜೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿಯಾಗಿ ಸರ್ಕಾರ ರಚನೆ ಹಕ್ಕು ಮಂಡಿಸಲಿದ್ದಾರೆ ಎಂದು ತಿಳಿದುಬಂದಿದೆ.