ಮಹಾರಾಷ್ಟ್ರ ರಾಜಕಾರಣ ಈಗ ನಿರ್ಣಾಯಕ ಹಂತ ತಲುಪಿದ್ದು, ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸೂಚಿಸಿದ್ದಾರೆ. ಇದನ್ನು ಪ್ರಶ್ನಿಸಿ ಈಗ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇದರ ವಿಚಾರಣೆ ಇಂದು ಸಂಜೆ ನಡೆಯುವ ಸಾಧ್ಯತೆ ಇದೆ.
ನಾಳೆ ಸದನ ಕರೆಯಲು ರಾಜ್ಯಪಾಲರು ಸೂಚಿಸಿರುವ ಹಿನ್ನೆಲೆಯಲ್ಲಿ ಇದರಲ್ಲಿ ಹಾಜರಾಗಲು ಅಸ್ಸಾಂನ ಗುವಾಹಟಿಯ ರಾಡಿಸನ್ ಬ್ಲೂ ಪಂಚತಾರ ಹೋಟೆಲ್ ನಲ್ಲಿ ಬೀಡು ಬಿಟ್ಟಿರುವ ಬಂಡಾಯ ಶಾಸಕರು ಇಂದು ಸಂಜೆಯೊಳಗಾಗಿ ಮುಂಬೈಗೆ ಆಗಮಿಸಲಿದ್ದಾರೆ ಎನ್ನಲಾಗಿದೆ. ಅವರನ್ನು ಕರೆತರಲು ಸೂರತ್ನಿಂದ ವಿಶೇಷ ವಿಮಾನ ಗುವಾಹಟಿಗೆ ತೆರಳಿದೆ ಎಂದು ತಿಳಿದುಬಂದಿದೆ.
ನಾಳೆ 11:00 ಗಂಟೆಗೆ ಮಹಾರಾಷ್ಟ್ರ ವಿಧಾನಮಂಡಲದ ಅಧಿವೇಶನ ಆರಂಭವಾಗಲಿದ್ದು, ಆದರೆ ಇದಕ್ಕೆ ತಡೆ ನೀಡುವಂತೆ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ. ಒಂದು ವೇಳೆ ಇದಕ್ಕೆ ತಡೆ ಸಿಕ್ಕರೆ ಮಹಾರಾಷ್ಟ್ರ ರಾಜಕಾರಣದ ನಾಟಕೀಯ ಬೆಳವಣಿಗೆಗಳು ಮತ್ತಷ್ಟು ದಿನ ಮುಂದುವರೆಯುವ ಸಾಧ್ಯತೆ ಇದೆ.