![](https://kannadadunia.com/wp-content/uploads/2019/01/Q3-budget-planning-creative-commons-images-770x433.jpg)
ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಜನವರಿ 31 ರಿಂದ ಅಧಿವೇಶನ ಆರಂಭವಾಗಲಿದೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಗೆ ಈಗಾಗಲೇ ಸಿದ್ದತೆ ಆರಂಭಿಸಿದ್ದು, ಹಲವು ಕ್ಷೇತ್ರಗಳ ಪ್ರತಿನಿಧಿಗಳಿಂದ ಅಭಿಪ್ರಾಯ ಪಡೆದುಕೊಂಡಿದ್ದಾರೆ.
ಪಂಚ ರಾಜ್ಯಗಗಳ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಈ ಬಜೆಟ್ ಮಂಡನೆಯಾಗುತ್ತಿರುವ ಕಾರಣ ಹಲವು ಮಹತ್ವದ ಘೋಷಣೆಗಳನ್ನು ಮಾಡುವ ಸಾಧ್ಯತೆಯಿದೆ.