ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ಸಾವಿರಕ್ಕಿಂತಲೂ ಕಡಿಮೆ ಕೇಸ್ ದಾಖಲಾಗಿದೆ. ಕೇವಲ 913 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ಸೋಂಕಿತರ ಸಾವಿನ ಸಂಖ್ಯೆಯಲ್ಲಿಯೂ ದಿಢೀರ್ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 13 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,21,358 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 12,597 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,316 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,24,95,089 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ
ನಿನ್ನೆ 2,84,073 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 1,84,70,83,279 ಡೋಸ್ ಲಸಿಕೆ ಹಾಕಲಾಗಿದೆ. ನಿನ್ನೆ 3,14,823 ಜನರನ್ನು ಕೋವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.