
ಅಮಿತಾಬ್ ಬಚ್ಚನ್ ಅವರ ಪಕ್ಕೆಲುಬಿಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತೀವ್ರ ನಿಗಾ ಘಟಕದಲ್ಲಿಟ್ಟು ವೈದ್ಯರು ಅವರ ಮೇಲ್ವಿಚಾರಣೆ ನಡೆಸಿದ್ದರು ಎಂದು ಮೂಲಗಳು ಹೇಳಿವೆ.
ಹೈದರಾಬಾದಿನಲ್ಲಿ ನಡೆದ ಪ್ರಾಜೆಕ್ಟ್ ಕೆ ಶೂಟಿಂಗ್ ವೇಳೆ ಈ ಘಟನೆ ನಡೆದಿದ್ದು, ಅಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಬಿಗ್ ಬಿ ಮನೆಗೆ ಮರಳಿದ್ದಾರೆ.
ಸ್ವತಃ ಅವರೇ ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದಾರೆ.
— Vyjayanthi Movies (@VyjayanthiFilms) October 11, 2022