ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ಸಿಎಂ ಯಡಿಯೂರಪ್ಪ ರಾಜೀನಾಮೆ ಪತ್ರ ಸ್ವೀಕರಿಸಿದ ರಾಜ್ಯಪಾಲ ಗೆಹ್ಲೋಟ್, ಮುಂದಿನ ಮುಖ್ಯಮಂತ್ರಿ ಘೋಷಣೆಯಾಗುವವರೆಗೂ ಹಂಗಾಮಿ ಸಿಎಂ ಆಗಿ ಮುಂದುವರೆಯುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸರ್ಕಾರದ ಸಾಧನಾ ಸಮಾವೇಶದ ವೇಳೆ ಮಾತನಾಡಿದ ಸಿಎಂ ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದು, ಬಳಿಕ ಸಂಪುಟ ಸಹೋದ್ಯೋಗಿಗಳ ಜೊತೆ ರಾಜಭವನಕ್ಕೆ ತೆರಳಿ ರಾಜ್ಯಪಾಲ ಗೆಹ್ಲೋಟ್ ಅವರನ್ನು ಭೇಟಿಯಾಗಿ ಅಧಿಕೃತವಾಗಿ ರಾಜೀನಾಮೆ ಪತ್ರ ಹಸ್ತಾಂತರಿಸಿದರು.