ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಿಎಂ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟಕ್ಕೂ ಸೋಂಕು ವಕ್ಕರಿಸಿದೆ. ಸಚಿವ ಬಿ.ಸಿ. ನಾಗೇಶ್ ಬೆನ್ನಲ್ಲೇ ಇದೀಗ ಕಂದಾಯ ಸಚಿವ ಆರ್. ಅಶೋಕ್ ಅವರಿಗೂ ಕೊರೊನಾ ದೃಢಪಟ್ಟಿದೆ.
ಇತ್ತೀಚೆಗಷ್ಟೇ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಚಿವರು ಹೋಂ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಚಿವ ಆರ್. ಅಶೋಕ್ ನಿನ್ನೆ ನಡೆದಿದ್ದ ಸಚಿವ ಸಂಪುಟ ಸಭೆಗೂ ಗೈರಾಗಿದ್ದು, ಕೊರೊನಾ ಸೋಂಕು ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.